ಮನೆ ರಾಜ್ಯ ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

0

ಚಿಕ್ಕಬಳ್ಳಾಪುರ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ಮಲೇಶಿಯಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊರ್ವನ ಬಳಿ ಒಂದು ಕೋಟಿ 91 ಲಕ್ಷ ರೂ. ಮೌಲ್ಯದ 5.48 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಇನ್ನೂ ಮತ್ತೊಂದು ಪ್ರಕರಣದಲ್ಲಿ ಪುಕೇಟ್ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಒಂದು ಕೋಟಿ ಆರು ಲಕ್ಷ ರೂ. ಮೌಲ್ಯದ 3.03 ಕೆಜಿ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.