ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ.
ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.















