ಮೈಸೂರು(Mysuru): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಹೆಚ್.ಡಿ.ದೇವೇಗೌಡರಲ್ಲಿ ಕ್ಷಮೆಯಾಚಿಸಬೇಕೆಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರ ಬಗ್ಗೆ ಅವಹೇಳನ ಮಾಡೋದು ಸರಿಯಲ್ಲ. ಹೆಚ್.ಡಿ ದೇವೇಗೌಡರು ದೇಶದ ಪ್ರಧಾನಿಯಾಗಿ ಕರ್ನಾಟಕದ ಗೌರವ ಹೆಚ್ಚಿಸಿದವರು. ರಾಜಕೀಯವಾಗಿ ಏನು ಬೇಕಾದ್ರೂ ಚರ್ಚೆ ಮಾಡಿ. ಆದರೆ ಅವರ ಆರೋಗ್ಯದ ಬಗ್ಗೆ ವೈಯಕ್ತಿಕ ಟೀಕೆ ಸರಿಯಲ್ಲ. ಈಗಾಗಲೇ ರಾಜಣ್ಣ ಕ್ಷಮೆ ಕೇಳಿದ್ದಾರೆ. ಆದರೆ ಅವರನ್ನ ವೈಯಕ್ತಿಕವಾಗಿ ಭೇಟಿಯಾಗಿ ಕ್ಷಮೆಯಾಚಿಸಬೇಕು ಎಂದು ತಿಳಿಸಿದರು.
ನಿನ್ನೆ ಸಭೆಯೊಂದರಲ್ಲಿ ಮಾತನಾಡಿದ್ಧ ಕೆ.ಎನ್ ರಾಜಣ್ಣ, ದೇವೇಗೌಡರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೇ… ನಾಲ್ವರು ಮೇಲೆ ಹೋಗೋದು ಹತ್ತಿರದಲ್ಲೇ ಇದೆ ಎಂದು ಹೇಳಿಕೆ ನೀಡಿದ್ದರು.














