ಮನೆ ರಾಜ್ಯ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆ..!

ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆ..!

0

ಮೈಸೂರು : ಮಾರಕಾಸ್ತ್ರ ಹಿಡಿದು ಐವರ ಗ್ಯಾಂಗ್ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆಯ ಸ್ವಾಮಿ ಸರ್ವಿಸ್ ಸ್ಟೇಷನ್‌ನಲ್ಲಿ ನಡೆದಿದೆ.

ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿ 15,300 ರೂಪಾಯಿ ದರೋಡೆ ಮಾಡಿದ್ದಾರೆ. ನೆನ್ನೆ (ಫೆ.12) ರಾತ್ರಿ ಸುಮಾರು 10:30 ಗಂಟೆಗೆ ಈ ದರೋಡೆ ನಡೆದಿದೆ. ದರೋಡೆ ಹಾಗೂ ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದು ಮೊದಲು ಪೆಟ್ರೋಲ್ ಹಾಕಿಸುತ್ತಿದ್ದ ಗ್ಯಾಂಗ್, ನಂತರ ಕಚೇರಿ ಒಳಗೆ ನುಗ್ಗಿ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹಣ ಕಸಿದುಕೊಂಡು ಹೋಗಿದ್ದಾರೆ. ಪ್ರಕರಣ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.