ಮನೆ ರಾಜ್ಯ ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

0

ಬೆಂಗಳೂರು : ಹೆಂಡತಿಯ ಶೀಲ ಶಂಕಿಸಿ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇವಿಕಾ (55 ) ಕೊಲೆಯಾದ ಮಹಿಳೆ. ಪತ್ನಿ ಮೇಲೆ ಅನುಮಾನಗೊಂಡು ಮಧ್ಯರಾತ್ರಿ 12:45ರ ಸುಮಾರಿಗೆ ಆಕೆ ಮಲಗಿದ್ದ ವೇಳೆ ಪತಿ ಕುಮಾರ್ (65) ಮಚ್ಚಿನಿಂದ ಕುತ್ತಿಗೆಗೆ ಹೊಡೆದು ಹತ್ಯೆ ಮಾಡಿದ್ದಾನೆ.

ಇತ್ತೀಚಿಗೆ ದೇವಿಕಾ ಪತಿ ಹಾಗೂ ಮಕ್ಕಳೊಂದಿಗೆ ಕುಟುಂಬ ಸಮೇತ ಶಬರಿಮಲೆಗೆ ತೆರಳಿದ್ದರು. ಈ ವೇಳೆ ಪತ್ನಿ ಡ್ರೈವರ್ ಜೊತೆ ಮಾತನಾಡಿದ್ದಕ್ಕೆ ಪತಿ ಅನುಮಾನಗೊಂಡಿದ್ದ. ಬಳಿಕ ಹೆಂಡತಿ ಮೇಲೆ ಅನುಮಾನಿಸಿ ಗಲಾಟೆ ಮಾಡುತ್ತಿದ್ದ.

ಪತ್ನಿಯನ್ನು ಕೊಂದ ಬಳಿಕ ಆರೋಪಿ ಕುಮಾರ್ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಆರೋಪಿ ಕುಮಾರ್‌ನನ್ನು ಮಕ್ಕಳು ತಡೆದಿದ್ದಾರೆ. ಘಟನೆ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗಂಡ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.