ಮನೆ ರಾಜ್ಯ ಕೂಲಿ ಕಾರ್ಮಿಕರು ತೆರಳುತ್ತಿದ್ದ, ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ನಾಲ್ವರು ದುರ್ಮರಣ

ಕೂಲಿ ಕಾರ್ಮಿಕರು ತೆರಳುತ್ತಿದ್ದ, ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ನಾಲ್ವರು ದುರ್ಮರಣ

0

ಬಾಗಲಕೋಟೆ : ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ನಡೆದಿದೆ.

ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಮತ್ತು ರೇಖಾ ಭೂಕೆ (28) ಮೃತರು. ರಾತ್ರಿ 2 ಗಂಟೆ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆ ಬೂಸಾ ತಾಲೂಕಿನ ಗುಪವಾಡಿ ನಿವಾಸಿಗಳು ಎಂದು ಗುರುತಿಸಲಾಗಿದೆ.

ಈ ಘಟನೆ ಬಗ್ಗೆ ಜೊತೆ ಮಾತನಾಡಿದ ಎಸ್ಪಿ ಸಿದ್ದಾರ್ಥ ಗೋಯಲ್, ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಅಪಘಾತವಾಗಿದೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದ ವಾಹನ ಇದಾಗಿದೆ. ಜೋಡಿ ಟ್ರಾಲಿಗಳು ಟ್ರ‍್ಯಾಕ್ಟರ್ ಇಂಜಿನ್‌ನಿಂದ ಕಟ್ ಆಗಿ ಪಲ್ಟಿಯಾಗಿ ಅವಘಢ ಸಂಭವಿಸಿದೆ. ಒಂದು ಟ್ರಾಲಿ ಮೇಲೆ ಮತ್ತೊಂದು ಟ್ರಾಲಿ ಮಗುಚಿ ಬಿದ್ದ ಕಾರಣ ಅವಘಡವಾಗಿದೆ.

ಈ ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ಯರಗಟ್ಟಿಗೆ ಬಂದಿದ್ದ ಕಾರ್ಮಿಕರು ಇಂದು ನಸುಕಿನ ಜಾವ ವಾಪಸ್ ತಮ್ಮೂರಿಗೆ ಹೊರಟಾಗ ಘಟನೆ ನಡೆದಿದೆ. ಘಟನೆ ಸಂಬಂಧ ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.