ಬೆಂಗಳೂರು : ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫ್ಯಾನ್ಸಿ ಸ್ಟೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಈ ಸ್ಥಳದಲ್ಲಿ ಆರು ಅಗ್ನಿಶಾಮಕದಳ ವಾಹನಗಳು ಆಗಮಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡ ಹಿನ್ನೆಲೆ ಆಕ್ಸಿಜನ್ ಸಿಲಿಂಡರ್, ಮಾಸ್ಕ್ ಧರಿಸಿ ಅಗ್ನಿಶಾಮಕ ಸಿಬ್ಬಂದಿ ಅಂಗಡಿ ಒಳಗೆ ಹೋಗಿ, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಕಳೆದ ಒಂದು ಗಂಟೆಯಿಂದ ಕಾರ್ಯಾಚರಣೆ ನಡೆಯುತ್ತಿದೆ.














