ಮನೆ ರಾಜ್ಯ ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ; ಕಾಮಗಾರಿ ಶುರು..!

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ; ಕಾಮಗಾರಿ ಶುರು..!

0

ಮಡಿಕೇರಿ : 2018 ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದ್ರೆ ಸಾಕು ಜಿಲ್ಲೆಯ ಜನ ಬೆಚ್ಚಿಬಿಳುತ್ತಾರೆ. ಮತ್ತೊಂದು ಕಡೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತೆ. ಇದಕ್ಕೆ ಪರಿಹಾರ ಕಲ್ಲಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿಯುವ ಸ್ಥಳಗಳನ್ನು ಗುರುತಿಸಿ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲು ಮುಂದಾಗಿದೆ.

ಪ್ರತಿವರ್ಷ ಮಳೆಗಾಲದಲ್ಲಿ ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ, ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ರಸ್ತೆ ಕುಸಿತ ಅಥವಾ ಬೆಟ್ಟಗುಡ್ಡ ಕುಸಿಯುವುದು ಸಾಮಾನ್ಯವಾಗಿಬಿಟ್ಟಿದೆ. ಮಡಿಕೇರಿ-ಸಂಪಾಜೆ ರಸ್ತೆಯ 18 ಕಡೆಗಳಲ್ಲಿ ಗುಡ್ಡಗಳು ಕುಸಿತ ಸಂಭವಿಸುತ್ತಲೇ ಇತ್ತು. ಇದನ್ನ ಮನಗಂಡ ಅಂದಿನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗುಡ್ಡ ಕುಸಿತ ಉಂಟಾಗುವ ಹೆದ್ದಾರಿಗೆ ತಡೆಗೋಡೆ ನಿರ್ಮಿಸುವುದಕ್ಕೆ ಯೋಜನೆ ರೂಪಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದರು.

ಇದೀಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 18 ಕಡೆಗಳಲ್ಲಿ ತಡೆಗೋಡೆ ನಿರ್ಮಿಸುವುದಕ್ಕೆ ಸುಮಾರು 94.80 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ‌. ಈ ಹಿನ್ನೆಲೆ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮ ಪಂಚಾಯತಿ ವ್ಯಾಪ್ತಿ ಕರ್ತೋಜಿ ಗ್ರಾಮದಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದರಿಂದ ಹರ್ಷಗೊಂಡ ಸ್ಥಳೀಯರು ಕೇಂದ್ರ ಸರ್ಕಾರ ಹಾಗೂ ಯದುವೀರ್‌ ಅವರ ಕಾರ್ಯವನ್ನ ಶ್ಲಾಘಿಸಿದ್ದಾರೆ.