ಮನೆ ರಾಜ್ಯ ರಾಜ್ಯದಲ್ಲಿ 975 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 975 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 975 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,71,459ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ಮೃತರ ಸಂಖ್ಯೆ 40,077ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

668 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,24,900ಕ್ಕೆ ಏರಿಕೆಯಾಗಿದೆ. ಇನ್ನು 6,440 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 871 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,05,970ಕ್ಕೆ ಏರಿಕೆಯಾಗಿದೆ. ಉಳಿದಂತೆ ಮೈಸೂರಿನಲ್ಲಿ 22, ದಕ್ಷಿಣ ಕನ್ನಡದಲ್ಲಿ 14, ಧಾರವಾಡ, ಕೋಲಾರ 9, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡದಲ್ಲಿ 6, ಬೆಂಗಳೂರು ಗ್ರಾಮಾಂತ, ತುಮಕೂರಿನಲ್ಲಿ 5, ರಾಮನಗರ 4, ಬೆಳಗಾವಿ, ಕಲಬುರಗಿ 3, ಬಾಗಲಕೋಟೆ, ಬೀದರ್‌, ಚಿಕ್ಕಬಳ್ಳಾಪುರ, ಹಾಸನ, ರಾಯಚೂರಿನಲ್ಲಿ 2, ಬಳ್ಳಾರಿ, ಮಂಡ್ಯ 1 ಪ್ರಕರಣಗಳು ವರದಿಯಾಗಿವೆ.

ಮೈಸೂರಿನಲ್ಲಿ 22 ಮಂದಿಗೆ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿನ ಪ್ರಕರಣ 2,29,782 ಏರಿಕೆಯಾಗಿದೆ. 12 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದು, ಗುಣಮುಖರಾದವರ ಸಂಖ್ಯೆ 2,27,154 ತಲುಪಿದೆ. 69 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 2,559 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.