ಮನೆ ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 56,432 ಹುದ್ದೆಗಳ ಭರ್ತಿ..!

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 56,432 ಹುದ್ದೆಗಳ ಭರ್ತಿ..!

0

ಬೆಂಗಳೂರು : ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದಿದ್ದಾರೆ.

ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ ಐದು ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಹೇಳಿದ್ದಾರೆ.