ನವದೆಹಲಿ : 2026ರ ಟಿ20 ವಿಶ್ವಕಪ್ ಅನ್ನು ಟೀಂ ಇಂಡಿಯಾ ಎತ್ತಿ ಹಿಡಿದಿದೆ. ಈ ಹಿನ್ನೆಲೆ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ಟೀಂ ವರ್ಕ್ ಅನ್ನು ಪ್ರತಿಬಿಂಬಿಸುತ್ತದೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ ಎಂದು ಶ್ಲಾಘಿಸಿದ್ದಾರೆ.
ಆರಂಭದಲ್ಲಿ ಬ್ಯಾಟರ್ಗಳ ವಿಸ್ಫೋಟಕ ಬ್ಯಾಟಿಂಗ್ ನಂತರ ಬೌಲರ್ಗಳ ಬೆಂಕಿ ಬೌಲಿಂಗ್ನಿಂದ ಫೈನಲ್ ಪಂದ್ಯದಲ್ಲಿ ಭಾರತ ಸತತ ಎರಡನೇ ಬಾರಿ ವಿಶ್ವಚಾಂಪಿಯನ್ ಪಟ್ಟ ಅಲಂಕರಿಸಿದೆ. ನ್ಯೂಜಿಲೆಂಡ್ ವಿರುದ್ಧ 96 ರನ್ಗಳಿಂದ ಗೆದ್ದ ಭಾರತ ಮೂರನೇ ಬಾರಿ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.















