ಮನೆ ರಾಜ್ಯ ರಾಜ್ಯದಲ್ಲಿ 826 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 826 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 826 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಸಿಲ್ಲ. ಇದುವರೆಗೂ ಮೃತಪಟ್ಟಿರುವವರ ಸಂಖ್ಯೆ 40077 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

600 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,25,500ಕ್ಕೆ ಏರಿಕೆಯಾಗಿದೆ. ಇನ್ನು 6666 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 746 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,0,6716ಕ್ಕೆ ಏರಿಕೆಯಾಗಿದೆ.