ಮನೆ ರಾಜ್ಯ ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ – ಡಿಸಿಎಂ ಡಿಕೆಶಿ

ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ – ಡಿಸಿಎಂ ಡಿಕೆಶಿ

0

ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲೆಸೆದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಕುರಿತು ಚರ್ಚೆ ವೇಳೆ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬೇಕು ಎಂದು ಹೇಳಿದಾಗ, ಡಿಕೆಶಿ ತಿರುಗೇಟು ನೀಡಿದರು.

ಸುರೇಶ್ ಅವರೇ ನೀವು ಹಿರಿಯ ನಾಯಕರಿದ್ದೀರಿ, ಮಾಜಿ ನಿಮ್ಮ ಜತೆ ಮಾಜಿ ಡಿಸಿಎಂ ಇದ್ದಾರೆ. ಈ ಅಭಿಪ್ರಾಯ ಕೇವಲ ನಿಮ್ಮ ವೈಯಕ್ತಿಕವಲ್ಲ. ಅದು ಪಕ್ಷದ ಅಭಿಪ್ರಾಯ. ನೀವು ಏನು ಹೇಳುವಿರೋ ಅದರ ಬಗ್ಗೆ ಚಿಂತನೆ ನಡೆಸೋಣ. ನೀವು ಹೇಳುತ್ತಿರುವುದು ಸರಿಯಿಲ್ಲ ಎಂದು ಹೇಳುತ್ತಿಲ್ಲ. ಈ ಬಜೆಟ್ ಅಧಿವೇಶನದ ಒಳಗೆಯೇ ನಿಮ್ಮ ತೀರ್ಮಾನ ತಿಳಿಸಿ” ಎಂದು ಹೇಳಿದರು.

ಕೋಳಿ ಕೇಳಿ ಖಾರ ಅರೆದಂತಿದೆ, ಗ್ಯಾರಂಟಿ ಕೊಡುವಾಗ ನಮ್ಮನ್ನು ನೀವು ಕೇಳಿದ್ರ ಎಂದು ಸುರೇಶ್ ಅವರು ಪ್ರತಿಕ್ರಿಯೆ ನೀಡಿದಾಗ, “ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆ ಆದರೂ ಬಿಡುವುದಿಲ್ಲ ಎಂದು ಹೇಳಿದ್ದರು. ಆನಂತರ ಅದು ಕಡಿಮೆ ಆಯಿತು, ಇದು ಕಡಿಮೆ ಆಯಿತು ಎಂದವರು ನೀವು. ಅದಕ್ಕೆ ಆರು ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ನಿಮ್ಮ ಮಾತನ್ನೂ ಕೇಳಿ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ” ಎಂದು ತಿರುಗೇಟು ನೀಡಿದರು.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಒಬ್ಬರ ಮುಖ ಮತ್ತೊಬ್ಬರು ನೋಡುವುದಿಲ್ಲ ಎಂದು ಹೇಳಿದಾಗ ಎದ್ದು ಮಾತನಾಡಿದ ಶಿವಕುಮಾರ್ ಅವರು, “ಬಿಜೆಪಿಯಲ್ಲಿರುವ ನನ್ನ ಕೆಲವು ಸ್ನೇಹಿತರಿಗೆ ನನ್ನನ್ನು ಸ್ಮರಿಸದಿದ್ದರೆ ಅವರಿಗೆ ಸಮಾಧಾನವಿಲ್ಲ, ನಿದ್ದೆ ಬರುವುದಿಲ್ಲ, ಸಂತೋಷ ಆಗುವುದಿಲ್ಲ, ಸ್ಫೂರ್ತಿ ಬರುವುದಿಲ್ಲ ಎಂದರು.

ಹೀಗಾಗಿ ನನ್ನ ಸದಾ ನೆನಪಿಸಿಕೊಳ್ಳುತ್ತಿರುತ್ತಾರೆ. ಅವರಿಗೆ ಬಜೆಟ್ ವಿರುದ್ಧವಾಗಿ ಮಾತನಾಡಲು ಏನು ಇಲ್ಲದ ಕಾರಣ ನನ್ನ ವಿಚಾರ ಎತ್ತಿ ಮಾತನಾಡುತ್ತಾರೆ. ಮಾತನಾಡಲಿ, ಖುಷಿಪಡಲಿ. ಧೈರ್ಯವಿರುವ ಒಬ್ಬ ವ್ಯಕ್ತಿ ಬಹುಮತ ತರಬಲ್ಲ ಎದು ನಂಬಿರುವವನು ನಾನು” ಎಂದು ತಿಳಿಸಿದರು.