ದಾವಣಗೆರೆ : ಕಾಂಗ್ರೆಸ್ನ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರುವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ ನಡೆಯಲಿದೆ. ಉಪಚುನಾವಣೆ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2,31,683 ಮತದಾರರಿದ್ದು ಇದರಲ್ಲಿ 1,13,654 ಪುರುಷರು, 1,17,986 ಮಹಿಳೆಯರು ,43 ತೃತೀಯ ಲಿಂಗಿಗಳು ಇದ್ದಾರೆ. ಕ್ಷೇತ್ರವೂ 284 ಮತಗಟ್ಟೆಗಳನ್ನು ಹೊಂದಿದೆ. ನೀತಿ ಸಂಹಿತೆ ಕೇವಲ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮಾತ್ರ ಜಾರಿಯಾಗಲಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣೆ ವೆಚ್ಚ 40 ಲಕ್ಷ ರೂ.ಗೆ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಮುಕ್ತಾಯವಾಗುವರೆಗೂ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ರಜೆಗಳನ್ನು ರದ್ದು ಮಾಡಲಾಗಿದೆ. ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೇಂದ್ರ ಸ್ಥಾನದಿಂದ ಹೊರ ಹೋಗುವಂತಿಲ್ಲ. ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸೂಕ್ತ ಭದ್ರತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.















