ರಾಯಚೂರು : ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ.
ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಸಿಂಧನೂರು ಬಸ್ ನಿಲ್ದಾಣದಲ್ಲಿ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















