ಮನೆ ರಾಜ್ಯ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ – ಡಿಕೆಶಿ

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ – ಡಿಕೆಶಿ

0

ಬೆಂಗಳೂರು : ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ. ಆದ ಕಾರಣ ನಾನು, ಹೆಚ್.ಕೆ ಪಾಟೀಲ್ ಹಾಗೂ ಎಂ.ಬಿ ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಚರ್ಚೆಯ ವಿಚಾರಗಳನ್ನು ಬಂದ ನಂತರ ತಿಳಿಸುತ್ತೇವೆ. ಎಲ್ಲರು ಒಟ್ಟಾಗಿ ನೀರಾವರಿ ವಿಚಾರಗಳ ಬಗ್ಗೆ ತೀರ್ಮಾನ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.