ಮನೆ ರಾಜ್ಯ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

0

ಬೆಂಗಳೂರು : ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಇಂದಿನಿಂದ ಪ್ರಾರಂಭ ಆಗಲಿದೆ. ಪರೀಕ್ಷೆಗೆ ಎಕ್ಸಾಂ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದೆ.

ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ ನಡೆಯಲಿದೆ. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 7,75,979 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. 62,938 ಪುನರಾವರ್ತಿತ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಶುಭಹಾರೈಸಿದ್ದಾರೆ. ಮಲ್ಲೇಶ್ವರಂ ಕರ್ನಾಟಕ ಶಾಲೆ ಪರೀಕ್ಷಾ ಕೇಂದ್ರಕ್ಕೆ ತೆರಳಿ ವಿದ್ಯಾರ್ಥಿಗಳಿಗೆ ವಿಶ್‌ ಮಾಡಿದ್ದಾರೆ. ಪರೀಕ್ಷೆ ಚೆನ್ನಾಗಿ ಬರೆಯಿರಿ. ಭಯ ಬಿಟ್ಟು ಪರೀಕ್ಷೆ ಬರೆಯಿರಿ ಎಂದು ಸಲಹೆ ನೀಡಿದ್ದಾರೆ.