ಮನೆ ರಾಜ್ಯ ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ

ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ

0

ಮಡಿಕೇರಿ : ಕುಶಾಲನಗರದ ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ಒಂಟಿ ಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದೆ. ಬೆಟ್ಟದ ಕಾಡು ನಿವಾಸಿ ಹೆಚ್.ಟಿ. ಸುನಿಲ್ ಎಂಬವರಿಗೆ ಸೇರಿದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದ, ದಂತದಿಂದ ಗುದ್ದಿದ ಪರಿಣಾಮ ಆಟೋ ಜಖಂಗೊಂಡಿದೆ.

ಗ್ರಾಮದ ಶ್ರೀ ಸತ್ಯನಾರಾಯಣ ದೇವಾಲಯದ ಸುತ್ತಮುತ್ತಲಿನಲ್ಲಿ ಹಾಗೂ ಎಂ.ಜಿ.ಕಾಲೋನಿ ಸುತ್ತಮುತ್ತ ಸಂಚರಿಸಿ ಕಾಫಿ ತೋಟದೊಳಗೂ ದಾಂಧಲೆ ನಡೆಸಿದೆ. ಸಲಗವನ್ನು ಕಂಡ ಗ್ರಾಮಸ್ಥರು ದಿಕ್ಕಪಾಲಾಗಿ ಓಡಿ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.

ಒಂಟಿ ಸಲಗ ಗ್ರಾಮದಲ್ಲಿ ಸಂಚರಿಸಿದ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯ ಸಿಬ್ಬಂದಿ ಡ್ರೋನ್ ಕ್ಯಾಮೆರಾ ಬಳಸಿ ಆನೆಯನ್ನು ಪತ್ತೆಹಚ್ಚಿ ಕಾಡಿಗೆ ಅಟ್ಟಿದ್ದಾರೆ.