ಮನೆ ರಾಜ್ಯ ಡಿಕೆಶಿ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ..!

ಡಿಕೆಶಿ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ..!

0

ಕೊಪ್ಪಳ : ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (60) ಅವರು ವಿಧಿವಶರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕರಿಯಣ್ಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಮಾ.23) ಕೊನೆಯುಸಿರೆಳೆದಿದ್ದಾರೆ.

ಕೊಪ್ಪಳ ತಾಲೂಕಿನ ಯಲಮಗೇರಿ ನಿವಾಸಿಯಾಗಿರುವ ಕರಿಯಣ್ಣ ಸಂಗಟಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದರು. ಅಲ್ಲದೇ ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು.