ಮನೆ ಸುದ್ದಿ ಜಾಲ ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ..!

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ..!

0

ಬೀದರ್ : ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಬ್ರಿಮ್ಸ್ ವಸತಿ ನಿಲಯಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ವಿಧಿವಿಜ್ಞಾನ ತಂಡ ಕೂಡ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.