ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.
ಭಾರೀ ಮಳೆ ಹಿನ್ನೆಲೆ ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.















