ಮನೆ ಸುದ್ದಿ ಜಾಲ ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

0

ನವದೆಹಲಿ : ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಇಂಡಿಗೋ ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಬೋಯಿಂಗ್ 737 ವಿಮಾನ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ದೆಹಲಿಗೆ ಪ್ರಯಾಣಿಸುತ್ತಿತ್ತು. ಎಂಜಿನ್‌ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆ ಬೆಳಗ್ಗೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಹಿನ್ನೆಲೆ ರನ್ ವೇ 28ರಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ವಿಮಾನದಲ್ಲಿ 161 ಪ್ರಯಾಣಿಕರಿದ್ದರು. ಸದ್ಯ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಟರ್ಕಿಯ ಕೊರೆಂಡನ್ ಏರ್‌ಲೈನ್ಸ್‌ಗೆ ಸೇರಿದ ಈ ವಿಮಾನವನ್ನು ಇಂಡಿಗೋ ಸಂಸ್ಥೆ ಲೀಸ್‌ಗೆ ಪಡೆದಿದೆ.