ಮನೆ ಮನರಂಜನೆ ಕಾಳಿ ಮಾತೆ ಕೈಯಲ್ಲಿ ಸಿಗರೇಟ್:  ನಿರ್ದೇಶಕಿ ಲೀನಾ ವಿರುದ್ಧ ದೂರು ದಾಖಲು

ಕಾಳಿ ಮಾತೆ ಕೈಯಲ್ಲಿ ಸಿಗರೇಟ್:  ನಿರ್ದೇಶಕಿ ಲೀನಾ ವಿರುದ್ಧ ದೂರು ದಾಖಲು

0

ಬೆಂಗಳೂರು(Bengaluru): ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ದೆಹಲಿಯ ಸ್ಥಳೀಯ ವಕೀಲರೊಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಲೀನಾ ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದು, ಈ ಚಿತ್ರದ  ಪೋಸ್ಟರ್‌ ಹಂಚಿಕೊಂಡಿದ್ದಾರೆ.  ಅದರಲ್ಲಿ ಹಿಂದೂ ದೇವತೆ ಕಾಳಿ ಮಾತೆಯನ್ನು ಸಿಗರೇಟ್ ಸೇದುತ್ತಿರುವ ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂ(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ.

ಈ ಪೋಸ್ಟರ್‌ ಹಾಗೂ ಲೀನಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ದೂರು ನೀಡಿರುವ ವಕೀಲರು, ಲೀನಾ ಅವರು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಅವರನ್ನು ಕೂಡಲೇ ಬಂಧಿಸಬೇಕು ಎಂದಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.