ಯುಗಾದಿ ಹಬ್ಬದಂದು ರಿಷಬ್ ಅವರು ಮುಂದಿನ ಚಿತ್ರದ ಬಗ್ಗೆ ಸುಳಿವು ನೀಡಿದ ನಂತರ ಹೊಂಬಾಳೆ ಫಿಲ್ಮ್ಸ್‌ನ್ನು ಅನ್‌ಫಾಲೋ ಮಾಡಿದ್ದರು. ಈ ಬಗ್ಗೆ ವದಂತಿ ವೈರಲ್ ಆಗುತ್ತಿರುವಾಗಲೇ ಇದೀಗ ರುಕ್ಮಿಣಿ ವಸಂತ್ ಹಾಗೂ ರಾಜ್ ಬಿ ಶೆಟ್ಟಿ ಅವರನ್ನು ಅನ್‌ಫಾಲೋ ಮಾಡಿದ್ದರು. ರಿಷಬ್ ಈ ನಡೆಗೆ ಕಾರಣ ಏನು ಎಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೀತಿತ್ತು. ಸ್ನೇಹಿತ ರಕ್ಷಿತ್ ಶೆಟ್ಟಿ ಅವರನ್ನು ಕೂಡ ಅನ್‌ಫಾಲೋ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ರಿಷಬ್ ಶೆಟ್ಟಿ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ 1.7 ಮಿಲಿಯನ್ ಮಂದಿ ಫಾಲೋ ಮಾಡುತ್ತಿದ್ದಾರೆ. ಈವರೆಗೆ ಅವರು 453 ಪೋಸ್ಟ್‌ಗಳನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ನೇರವಾಗಿ ಇನ್‌ಸ್ಟಾಗ್ರಾಮ್ ಅಕೌಂಟ್ ಹ್ಯಾಂಡಲ್ ಮಾಡ್ತಿಲ್ಲ. 15 ದಿನಗಳ ಹಿಂದೆ ರಿಷಬ್ 140ಕ್ಕೂ ಅಧಿಕ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಫಾಲೋ ಮಾಡುತ್ತಿದ್ದರು. ಈಗ ಆ ಸಂಖ್ಯೆ 3ಕ್ಕೆ ಇಳಿದಿದೆ.
ಪತ್ನಿ ಪ್ರಗತಿ ಶೆಟ್ಟಿ ಅವರ ಇನ್‌ಸ್ಟಾಗ್ರಾಮ್ ಖಾತೆ, ತಮ್ಮದೇ ರಿಷಬ್ ಶೆಟ್ಟಿ ಫಿಲ್ಮ್ಸ್ ಚಿತ್ರ ನಿರ್ಮಾಣ ಸಂಸ್ಥೆಯ ಖಾತೆ ಹಾಗೂ ರಿಷಬ್ ಶೆಟ್ಟಿ ಫೌಂಡೇಷನ್ ಖಾತೆಯನ್ನು ಮಾತ್ರ ಈಗ ರಿಷಬ್ ಶೆಟ್ಟಿ ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ. ನಟ ಯಶ್ ಪತ್ನಿ ರಾಧಿಕಾ ಪಂಡಿತ್ ಅವರನ್ನು ಮಾತ್ರ ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ.ಇದೇ ರೀತಿ ರಿಷಬ್ ಈಗ ಅನ್‌ಫಾಲೋ ಮಾಡಿದ್ದಾರೆ.
ರಿಷಬ್ ಹಾಗೂ ರಾಜ್ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಪಾಪೋಹ ಬಹಳ ದಿನಗಳಿಂದ ಶುರುವಾಗಿತ್ತು. ಇತ್ತೀಚೆಗೆ ಹೊಂಬಾಳೆ ಫಿಲ್ಮ್ಸ್ ಹಾಗೂ ರಿಷಬ್ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಅದೇ ಕಾರಣಕ್ಕೆ ಇನ್‌ಸ್ಟಾಗ್ರಾಮ್‌ನಲ್ಲಿ ಹೊಂಬಾಳೆ ಅಕೌಂಟ್ ಅನ್‌ಫಾಲೋ ಮಾಡಿದ್ದಾರೆ ಎನ್ನುವ ಚರ್ಚೆ ನಡೆದಿತ್ತು. ಇದೀಗ ಎಲ್ಲ ಉಹಾಪೋಹಗಳಿಗೆ ಫುಲ್ ಸ್ಟಾಪ್ ಬಿದ್ದಿದೆ. ‘ಜೈಹನುಮಾನ್’ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. ಪ್ರಶಾಂತ್ ವರ್ಮಾ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು ಕೆಲ ದಿನಗಳ ಹಿಂದೆ ಹಂಪಿಯಲ್ಲಿ ಸಿನಿಮಾ ಸೆಟ್ಟೇರಿತ್ತು.
ಪೌರಾಣಿಕ ಅಂಶಗಳನ್ನು ಆಧುನಿಕ ಸಿನೆಮಾ ತಂತ್ರಜ್ಞಾನಗಳೊಂದಿಗೆ ಸಂಯೋಜಿಸುವಲ್ಲಿ ಪರಿಣತಿ ಹೊಂದಿರುವ ಪ್ರಶಾಂತ್ ವರ್ಮಾ, ‘ಜೈ ಹನುಮಾನ್’ ಚಿತ್ರವನ್ನು ಭಕ್ತಿಯ ಜತೆ ಜತೆಗೆ ಆ್ಯಕ್ಷನ್, ಭಾವನಾತ್ಮಕ ಅಂಶಗಳ ಸಮನ್ವಯದಲ್ಲಿ ಮೂಡಿ ಬರಲಿದೆ ಎಂದಿದ್ದಾರೆ. ಕಥೆಯ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಬಹಿರಂಗವಾಗದಿದ್ದರೂ, ಹನುಮಂತನ ಶೌರ್ಯ, ಭಕ್ತಿ ಮತ್ತು ಧರ್ಮದ ಸಂದೇಶ ಈ ಚಿತ್ರದ ಕೇಂದ್ರವಾಗಿರಲಿದೆ.















