ಬೆಂಗಳೂರು : ಗೃಹಸಚಿವ ಡಾ. ಜಿ.ಪರಮೇಶ್ವರ್ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ, ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಹಿಂದೂ ಜಾಗೃತನಾಗು’ ಎಂಬ ಎಕ್ಸ್ ಖಾತೆಯಿಂದ ಈ ವಿವಾದಾತ್ಮಕ ಪೋಸ್ಟ್ ಮಾಡಲಾಗಿದೆ. ಪೋಸ್ಟ್‌ನಲ್ಲಿ ಗೃಹಸಚಿವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಹೇಳಿಕೆ ನೀಡಲಾಗಿದೆ. ಪೋಸ್ಟ್ ಗೃಹಸಚಿವರ ಕುರಿತು ಮಾತ್ರವಲ್ಲದೆ, ಎರಡು ಧರ್ಮದವರ ನಡುವೆ ನಾಗರಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ಮತ್ತು ದ್ವೇಷಪೂರಿತವಾಗಿ ಆಘಾತವನ್ನುಂಟುಮಾಡುವ ಉದ್ದೇಶ ಹೊಂದಿದೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಸೈಬರ್ ಕ್ರೈಂ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. IT Act ಹಾಗೂ BNS ಸೆಕ್ಷನ್ 299 ಅಡಿಯಲ್ಲಿ ಈ ಕೇಸ್ ದಾಖಲಿಸಿ ತನಿಖೆ ನಡೆಸಲಾಗ್ತಿದೆ.















