ಚಿತ್ರದುರ್ಗ : ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ.
ನಿಖಿತಾ (23) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕ ಡಾ.ರಾಜು ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್‌ನೋಟ್‌ನಲ್ಲಿ ಡಾ.ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಧ್ಯಾಪಕ ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ. ಘಟನೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















