ಮನೆ ಸುದ್ದಿ ಜಾಲ ನರ್ಮ್ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ ಶಾಸಕ ಎಲ್.ನಾಗೇಂದ್ರ

ನರ್ಮ್ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ ಶಾಸಕ ಎಲ್.ನಾಗೇಂದ್ರ

0

ಮೈಸೂರು(Mysuru): ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ನಿರ್ಮಿಸಿರುವ ನರ್ಮ್ ಮನೆಗಳ ಸಂಕೀರ್ಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರಾದ ಎಲ್.ನಾಗೇಂದ್ರ ಅವರು ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ನರ್ಮ್ ಮನೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ವಿಚಾರವಾಗಿ ಗೋಕುಲಂ ಬಡಾವಣೆಯ ನಂದಗೋಕುಲ, ಬಿ.ಎಂ.ಶ್ರೀನಗರದ ಅಂಬೇಡ್ಕರ್ ಜ್ಞಾನಲೋಕ, ಪಿ.ಕೆ.ಸ್ಯಾನಿಟೋರಿಯಂ, ಮೇದರ್ ಬ್ಲಾಕ್ ನಲ್ಲಿರುವ 96 ಮನೆಗಳ ಸಂಕೀರ್ಣಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.
ನರ್ಮ್ ಮನೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ ರೂ.4.50 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ತಾರಸಿ ಸೋರುವುದು, ಯುಜಿಡಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ, ಚರಂಡಿ ನಿರ್ಮಾಣ, ರಸ್ತೆ ಅಭಿವೃದ್ದಿ ಕಾಮಗಾರಿ ಒಳಗೊಂಡಿದೆ.
ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದೆ.
ಈ ಸಂದರ್ಭದಲ್ಲಿ ಮಹಾಪೌರರಾದ ಶ್ರೀಮತಿ ಸುನಂದಾ ಪಾಲನೇತ್ರ, ಮಹಾನಗರಪಾಲಿಕೆ ಉಪ ಆಯುಕ್ತರು (ಅಭಿವೃದ್ದಿ) ಶ್ರೀ ಮಹೇಶ್, ನಗರಪಾಲಿಕೆ ಸದಸ್ಯರಾದ ಶ್ರೀ ರವೀಂದ್ರ, ಮಾಜಿ ಸದಸ್ಯರ ಶ್ರೀ ದೇವರಾಜು, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸೋಮಶೇಖರರಾಜು, ಬಿ.ಎಲ್.ಎ-1 ಶ್ರೀ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶ್ರೀ ಪುನೀತ್, ರಾಜ್ಯ ಪರಿಷತ್ ಸದಸ್ಯ ಶ್ರೀ ನಂಜಪ್ಪ, ಮುಖಂಡರುಗಳಾದ ಶ್ರೀ ಭರತ್, ಶ್ರೀ ರವೀಂದ್ರ, ವಲಯ ಕಚೇರಿ ಅಭಿವೃದ್ದಿ ಅಧಿಕಾರಿಗಳು, ಇಂಜಿನಿಯರ್ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.