ಮನೆ ರಾಜ್ಯ ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ನಿಯಮ ಜಾರಿ – ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಿಂದ ಸಿಎಸ್‌ಗೆ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ನಿಯಮ ಜಾರಿ – ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಿಂದ ಸಿಎಸ್‌ಗೆ ಪತ್ರ

0

ಬೆಂಗಳೂರು : ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ಎಂಬ ನಿಯಮ ಜಾರಿ ಮಾಡಿರೋ ವಿಚಾರದಲ್ಲಿ ಈಗ ರಾಜ್ಯಪಾಲರು ಎಂಟ್ರಿ ಆಗಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಸಿಎಸ್‌ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂರನೇ ಭಾಷೆಗೆ ಅಂಕಗಳಿಗೆ ಬದಲಾಗಿ ಕೇವಲ ಗ್ರೇಡ್‌ಗಳನ್ನ ನೀಡುವ ನಿರ್ಧಾರದ ಬಗ್ಗೆ ಮರುಪರಿಶೀಲಿಸಬೇಕು. ಬೆಂಗಳೂರಿನ ʻಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʼ ಈ ಬಗ್ಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

3ನೇ ಭಾಷೆಗೆ ಅಂಕಗಳ ಬದಲಾಗಿ ಕೇವಲ ಗ್ರೇಡ್‌ಗಳನ್ನು ನೀಡುವುದರಿಂದ ಆ ವಿಷಯದ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆಯಾಗಬಹುದು‌. ವಿದ್ಯಾರ್ಥಿಗಳು ಆ ವಿಷಯವನ್ನ ಗಂಭೀರವಾಗಿ ಕಲಿಯುವ ಆಸಕ್ತಿ ಕಳೆದುಕೊಳ್ಳಬಹುದು‌.

ಈ ನಿರ್ಧಾರವು ಭಾಷಾ ವೈವಿಧ್ಯತೆ ಮತ್ತು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು. ಇದು ಶಿಕ್ಷಣದ ಗುಣಮಟ್ಟ ಮತ್ತು ಒಳಗೊಳ್ಳುವಿಕೆಯ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು ಎಂದು ಶಿಕ್ಷಕರು ಮತ್ತು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಷಯವನ್ನು ಶೈಕ್ಷಣಿಕ ಮತ್ತು ಆಡಳಿತಾತ್ಮಕ ದೃಷ್ಟಿಕೋನದಿಂದ ಸಮಗ್ರವಾಗಿ ಪರಿಶೀಲಿಸಬೇಕು. ಶಾಲಾ ಶಿಕ್ಷಣ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ವಿದ್ಯಾರ್ಥಿಗಳ ಮತ್ತು ರಾಜ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ರಾಜ್ಯಪಾಲರ ಸೂಚನೆ ನೀಡಿದ್ದಾರೆ.