ಮನೆ ಕ್ರೀಡೆ ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

0

ಸೂಪರ್ ಸಂಡೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಶನಿವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲೇ ಭರ್ಜರಿ ಶುಭಾರಂಭ ಪಡೆದ ಆರ್‌ಸಿಬಿ ಆಟಗಾರರು ದೇವರ ಮೊರೆಹೋಗಿದ್ದಾರೆ. ಪಾಟಿದಾರ್ ಮತ್ತು ಜಿತೇಶ್ ಕಳೆದ ವರ್ಷವೂ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದಲ್ಲಿ ಜಯಗಳಿಸಿದ್ದರು.

ಈ ಹಿನ್ನೆಲೆ ಈ ಬಾರಿಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 17 ವರ್ಷಗಳಲ್ಲಿ ಮೂರು ಬಾರಿ ಫೈನಲ್ ತಲುಪಿ ನಿರಾಸೆ ಅನುಭವಿಸಿದ್ದ, ಆರ್‌ಸಿಬಿ 18ನೇ ಆವೃತ್ತಿಯಲ್ಲಿ ಚೊಚ್ಚಲ ಐಪಿಎಲ್ ಪ್ರಶಸ್ತಿಗೆ ಮುತ್ತಿಟ್ಟಿತು.