ಬೆಂಗಳೂರು (Benagaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 749 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,73,034ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40078ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 940 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,26,440ಕ್ಕೆ ಏರಿಕೆಯಾಗಿದೆ. ಇನ್ನು 6474 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 696 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,074,12ಕ್ಕೆ ಏರಿಕೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 20, ಕೋಲಾರ ಮತ್ತು ಉಡುಪಿಯಲ್ಲಿ ತಲಾ 4, ಕಲಬುರಗಿ, ಮೈಸೂರು, ಬೀದರ್ ಮತ್ತು ಬಳ್ಳಾರಿಯಲ್ಲಿ ತಲಾ 3 ಪ್ರಕರಣಗಳು ದೃಢಪಟ್ಟಿವೆ.
24 ಗಂಟೆಗಳ ಅವಧಿಯಲ್ಲಿ 17,979 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.4.16 ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.23ರಷ್ಟಿದೆ.