ಮನೆ ರಾಷ್ಟ್ರೀಯ ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿ ಬೋಟ್‌ ಮಗುಚಿ 10 ಮಂದಿ ಸಾವು..!

ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿ ಬೋಟ್‌ ಮಗುಚಿ 10 ಮಂದಿ ಸಾವು..!

0

ಲಕ್ನೋ : ವೃಂದಾವನದ ಯಮುನಾದಲ್ಲಿ ಪಂಜಾಬ್‌ನಿಂದ ಬಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್‌ ಮಗುಚಿ 10 ಮಂದಿ ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ. ಇನ್ನೂ ಐವರು ನಾಪತ್ತೆಯಾಗಿದ್ದಾರೆ. ಕೇಸಿ ಘಾಟ್ ಬಳಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್‌ ಆಳವಾದ ನೀರಿಗೆ ಹೋಗಿ ತೇಲುವ ಪಾಂಟೂನ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ನೀರಿನ ಮಟ್ಟ ಏರಿಕೆಯಿಂದಾಗಿ ಇತ್ತೀಚೆಗೆ ಈ ಪ್ರದೇಶದಲ್ಲಿ ಒಂದು ಪಾಂಟೂನ್ ಸೇತುವೆಯನ್ನು ತೆರವುಗೊಳಿಸಲಾಗಿತ್ತು. ಕೆಲವು ಪಾಂಟೂನ್ ಡ್ರಮ್‌ಗಳು ನದಿಯಲ್ಲಿ ಉಳಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವುಗಳಲ್ಲಿ ಒಂದು ಈ ಬೋಟ್‌ಗೆ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ, ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗಾಗಿ ಭಗವಂತ್ ಮಾನ್, ಉತ್ತರ ಪ್ರದೇಶ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.