ಮನೆ ರಾಜ್ಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ..!

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ..!

0

ಧಾರವಾಡ : ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನ ತಮ್ಮ ಮನೆಯಲ್ಲೇ ಕೊಲೆ ಮಾಡಿರುವ ಘಟನೆ ಧಾರವಾಡ ನಗರದ ಹಾಶ್ಮಿನಗರದಲ್ಲಿ ನಡೆದಿದೆ. ಧಾರವಾಡ ನಗರದ ಮನೆಯಲ್ಲೇ ಕೊಲೆ ನಡೆದಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಫೈರೋಜ್ ಪಠಾಣ್ ಈ ಮೊದಲು ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. ಆದ್ರೆ ಕೊಲೆ ಯಾರು ಮಾಡಿದ್ದಾರೆ? ಕಾರಣ ಏನು ಅನ್ನೋದು ಇನ್ನಷ್ಟೇ ತಿಳಿಯಬೇಕಿದೆ. ಫೈರೋಜ್ ಆಪ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಇತ್ತ ಫೈರೋಜ್‌ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.