ಮನೆ ರಾಜ್ಯ ರೈತರಿಗೂ ತಟ್ಟಿದ್ದ ಯುದ್ಧದ ಬಿಸಿ – ತರಕಾರಿ ದರದಲ್ಲಿ ಭಾರೀ ಕುಸಿತ

ರೈತರಿಗೂ ತಟ್ಟಿದ್ದ ಯುದ್ಧದ ಬಿಸಿ – ತರಕಾರಿ ದರದಲ್ಲಿ ಭಾರೀ ಕುಸಿತ

0

ಚಿಕ್ಕಬಳ್ಳಾಪುರ : ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಲವು ಹೋಟೆಲ್‍ಗಳು ಬಂದ್ ಆಗಿವೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಗ್ಯಾಸ್​ ಅಭಾವ ಮುಂದುವರೆದಿದೆ. ಹೋಟೆಲ್​ಗಳು ಬಂದ್ ಆಗುತ್ತಿವೆ. ಹೀಗಾಗಿ ಸದ್ಯ ನಗರದಲ್ಲಿ ತರಕಾರಿಗೆ ಬೆಲೆ ಇಲ್ಲದಂತಾಗಿದ್ದು, ರಾಶಿ-ರಾಶಿ ತರಕಾರಿ ಮಾರುಕಟ್ಟೆಯಲ್ಲಿ ಕೊಳೆಯುವಂತಾಗಿವೆ.

ಚಿಕ್ಕಬಳ್ಳಾಪುರ ಹೂವು, ಹಣ್ಣು, ತರಕಾರಿಗೆ ಖ್ಯಾತಿ ಪಡೆದಿದೆ. ಅಲ್ಲಿ ಬೆಳೆಯುವ ತರಕಾರಿಗಳು ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಮೆಟ್ರೋ ನಗರಗಳಿಗೆ ದಿನನಿತ್ಯ ರಫ್ತಾಗುತ್ತದೆ. ಆದರೆ ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ಬೆಂಗಳೂರು ಸೇರಿದಂತೆ ವಿವಿಧಡೆ ಹೋಟೆಲ್‍ಗಳು ಬಂದ್ ಆಗಿವೆ. ಇದರಿಂದ ಚಿಕ್ಕಬಳ್ಳಾಪುರದ ತರಕಾರಿಗೆ ಬೆಲೆ ಇಲ್ಲದಂತಾಗಿದೆ. ಹಾಗಾಗಿ ತರಕಾರಿಗಳ ಬೆಲೆ ತೀವ್ರ ಕುಸಿತವಾಗಿದೆ. ಬೆಸಿಗೆಯಲ್ಲಿ ಕೆ.ಜಿ ಬೀನ್ಸ್ ಬೆಲೆ ಬರೋಬ್ಬರಿ 80 ರೂಪಾಯಿಯಿಂದ 100 ರೂಪಾಯಿವರೆಗೂ ಇರುತ್ತೆ, ಆದರೆ ಈ ಭಾರಿ ಮೂಟೆ ಬೀನ್ಸ್ ಬೆಲೆ 300 ರೂಪಾಯಿಯಿಂದ 400 ನೂರು ರೂಪಾಯಿಗೆ ಬಿಕಾರಿಯಾಗುತ್ತಿದೆ.

ಇರಾನ್, ಇಸ್ರೇಲ್-ಅಮೇರಿಕ ಯುದ್ಧ ಆರಂಭವಾಗುವುದಕ್ಕೂ ಮುನ್ನ ತರಕಾರಿಗಳಿಗೆ ಒಳ್ಳೆಯ ಬೆಲೆಯಿತ್ತು. ಕಳೆದ 20 ದಿನಗಳಿಂದ ತರಕಾರಿಗಳ ಬೆಲೆ ತೀವ್ರ ಕುಸಿತಿದೆ. ಬೀನ್ಸ್ ಕೆಜಿಗೆ 20 ರೂ, ಕ್ಯಾರೆಟ್ 8 ರೂ, ಸೋರೆಕಾಯಿ 5 ರೂ, ಆಲೂಗಡ್ಡೆ 6 ರೂ, ಬೆಂಡೆಕಾಯಿ 10 ರೂ, ಈರುಳ್ಳಿ 12 ರೂ, ಮೂಲಂಗಿ 5 ರೂ, ಆಗಲಕಾಯಿ 15 ರೂ, ಕ್ಯಾಪ್ಸಿಕಂ 20 ರೂ, ಬದನೇಕಾಯಿ 2 ರೂ, ದರ ಕುಸಿದಿದೆ. ಇನ್ನು ಹಗಲು-ರಾತ್ರಿ ಕಷ್ಟಪಟ್ಟು ತರಕಾರಿ ಬೆಳೆದ ರೈತರು ಕಣ್ಣೀರು ಹಾಕುವಂತಾಗಿದೆ.