ಮನೆ ಅಪರಾಧ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆಗೈದ ಅನಾಮಿಕ ವ್ಯಕ್ತಿ

ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆಗೈದ ಅನಾಮಿಕ ವ್ಯಕ್ತಿ

0

ಹುಬ್ಬಳ್ಳಿ(Hubballi):  ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿಯನ್ನು ಅನಾಮಿಕ ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದಿದೆ.

ಸರಳವಾಸ್ತು ಖ್ಯಾತಿಯ ಡಾ.ಚಂದ್ರಶೇಖರ್ ಗುರೂಜಿ ತಮ್ಮ ಬ್ಯುಸಿನೆಸ್ ವಿಚಾರಕ್ಕಾಗಿ ಹುಬ್ಬಳ್ಳಿಗೆ ಆಗಮಿಸಿದ್ದು, ನಗರದ ಉಣಿಕಲ್ ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಡಾ.ಚಂದ್ರಶೇಖರ್ ಗುರೂಜಿ ಮೇಲೆ ದಾಳಿ ನಡೆಸಿದ ಅನಾಮಿಕ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಡಾ. ಚಂದ್ರಶೇಖರ್ ಗುರೂಜಿಯ ಮೃತದೇಹವನ್ನು ರವಾನಿಸಲಾಗಿದ್ದು, ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಪೊಲೀಸ್ ಕಮಿಷನರ್ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಆರೋಪಿಯ ಬಂಧನಕ್ಕೆ ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.