ಮನೆ ಸುದ್ದಿ ಜಾಲ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು..!

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು..!

0

ಕಾರವಾರ : ಅತೀ ವೇಗದ ಚಾಲನೆಯಿಂದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.

ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ಘಟನೆ ಸಂಬಂಧ ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.