ಮನೆ ರಾಜ್ಯ ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು..!

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು..!

0

ಬೀದರ್ : ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ. ನಾವದಗಿ ಗ್ರಾಮದ ರೇವಣಸಿದ್ದ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28) ಸಿಡಿಲಿಗೆ ಬಲಿಯಾದ ದುರ್ದೈವಿ ಯುವಕರಾಗಿದ್ದಾರೆ.

ನೆನ್ನೆ (ಗುರುವಾರ) ಸಂಜೆ (ಏ.23) ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಶುರುವಾಗಿದೆ. ಹೀಗಾಗಿ ಇಬ್ಬರು ರೈತರು ಜಮೀನಿನಲ್ಲಿದ್ದ ಮಾವಿನ ಮರದ ಕಳಗಡೆ ನಿಂತಿದ್ದರು. ಈ ವೇಳೆ ಮಾವಿನ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸ್ಥಳಕ್ಕೆ ಖಟಕ್ ಚಿಂಚೋಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಖಟಕ್ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.