ಬೆಂಗಳೂರು : ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾಗುವ ಮೊದಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿ ಅಂಗಳದಲ್ಲಿ ತಮ್ಮ ಪವರ್ ಕ್ಲೈಮ್ ಆರಂಭಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ದಾವಣಗೆರೆ ಉಪ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ನಾನಾ ಬೆಳವಣಿಗೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಡಿಕೆಶಿ ದೆಹಲಿಯಲ್ಲಿ ಗಾಂಧಿ ಕುಟುಂಬದ ನಾಯಕರನ್ನು ಭೇಟಿಯಾಗಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೀತಾರಾ? ಡಿಕೆಶಿಗೆ ಕುರ್ಚಿ ಬಿಟ್ಟು ಕೊಡ್ತಾರಾ ಅನ್ನೋದು ಯಕ್ಷ ಪ್ರಶ್ನೆಯಾಗಿದೆ. ಈ ಹಿಂದೆ ಎರೆಡೆರಡು ಬಾರಿ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿ ಸಿಎಂ-ಡಿಸಿಎಂ ಇಬ್ಬರೂ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇಬ್ಬರು ಬಹಿರಂಗವಾಗಿ ಒಗ್ಗಟ್ಟು ಪ್ರದರ್ಶಿಸಿದರೂ ಇಬ್ಬರ ಪರ ಇರುವ ಬೆಂಬಲಿಗ ಶಾಸಕರು ಪ್ರತ್ಯೇಕ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯನವರು 5 ವರ್ಷಗಳ ಕಾಲ ತಂದೆಯವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದರೆ ಡಿಕೆಶಿ ಬೆಂಬಲಿಗ ಶಾಸಕರು ಈ ಅವಧಿಯಲ್ಲೇ ಡಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳುತ್ತಿದ್ದಾರೆ.
ಇಲ್ಲಿಯವರೆಗೆ ಹೈಕಮಾಂಡ್ ನಾಯಕರು ಪಂಚರಾಜ್ಯಗಳ ಚುನಾವಣೆಯಲ್ಲಿ ಬ್ಯುಸಿ ಇದ್ದರು. ಈಗ ಚುನಾವಣೆ ಮುಗಿದ ಬೆನ್ನಲ್ಲೇ ಡಿಕೆ ಸಹೋದರರು ದೆಹಲಿಗೆ ಆಗಮಿಸಿದ್ದು ಭಾರೀ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮನವರು ಸಂಪುಟ ಪುನಾರಚನೆಗೆ ಹೈಕಮಾಂಡ್ ಮೇಲೆ ಒತ್ತಡ ತರಲು ಆಪ್ತ ಸಚಿವರ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದಾರೆ. ಇನ್ನೊಂದು ಕಡೆ ಡಿಕೆ ಸಹೋದರರು ದೆಹಲಿಯಲ್ಲಿ ಬೀಡುಬಿಟ್ಟು ಅಧಿಕಾರ ಹಸ್ತಾಂತರ ವಿಚಾರದಲ್ಲಿ ಸ್ಪಷ್ಟತೆ ಪಡೆಯಲು ಮುಂದಾಗಿದ್ದಾರೆ.
ಎರಡು ಬೆಳವಣಿಗೆಯನ್ನು ಗಮನಿಸಿದರೆ ಫಲಿತಾಂಶ ಪ್ರಕಟವಾದ ನಂತರ ಇವರೆಡರ ಪೈಕಿ ಒಂದು ಬದಲಾವಣೆ ಗ್ಯಾರಂಟಿ ಎಂದು ವಿಶ್ಲೇಷಿಸಲಾಗುತ್ತಿದೆ. ಬಜೆಟ್ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್ ಎಂದಿದ್ದರು.















