ಮನೆ ರಾಜ್ಯ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

0

ಬೆಂಗಳೂರು (Bengaluru): ಕನ್ನಡ ಚಲನಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರು ಮೆದುಳಿನ ರಕ್ತಸ್ರಾವದಿಂದ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದ ಅವರನ್ನು ಕೂಡಲೇ ಅಪೋಲೋ ಆಸ್ಪತ್ರೆಯ ತುರ್ತು ವಿಭಾಗಕ್ಕೆ ರವಾನಿಸಿ ಸೋಮವಾರ ತಡರಾತ್ರಿ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ. 

ಪ್ರಾಥಮಿಕ ತನಿಖೆಯಲ್ಲಿ ಅವರ ಮೆದುಳಿನ ಎಡಭಾಗದಲ್ಲಿ ದೊಡ್ಡ ಗಾಯವಾಗಿದೆ ಎಂದು ತಿಳಿದುಬಂದಿದೆ. ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರು ನಿಕಟ ನಿಗಾವಣೆಯಲ್ಲಿದ್ದು, ವೆಂಟಿಲೇಟರ್ ನೆರವಿನಲ್ಲಿದ್ದಾರೆ. ಅವರ ದೇಹದ ಪ್ರಮುಖ ಅಂಗಗಳು ಸ್ಥಿರವಾಗಿದೆ.

ಅಧಿಕ ರಕ್ತದೊತ್ತಡದಿಂದ ಕಿಶೋರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದಿದ್ದಾಗಿ ಚಲನಚಿತ್ರ ನಿರ್ದೇಶಕ ಚೇತನ್ ಕುಮಾರ್, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇಡೀ ದಿನ ಅವರು ಆಫೀಸ್ ಗೆ ಬರಲಿಲ್ಲ. ಆದ್ದರಿಂದ ಆತಂಕಗೊಂಡು ಹೋಗಿ ಪರಿಶೀಲಿಸಿದಾಗ ಪ್ರಜ್ಞಾಹೀನರಾಗಿ ಬಿದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಕಿಶೋರ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದರು.

ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಚಿತ್ರವನ್ನು ನಿರ್ಮಿಸಿದ್ದ ಕಿಶೋರ್ ಪತ್ತಿಕೊಂಡ, ನಟ ಉಪೇಂದ್ರ ರಾವ್ ಅವರೊಂದಿಗೆ ಒಂದು ಪ್ರಾಜೆಕ್ಟ್‌  ಮಾಡುತ್ತಿದ್ದಾರೆ. ಧೀರೇನ್ ರಾಮ್‌ಕುಮಾರ್ ಅವರೊಂದಿಗೆ ಇನ್ನೊಂದು ಚಿತ್ರ ಮಾಡುವ ಚಿಂತನೆ ನಡೆಸಿದ್ದಾರೆ.