ಮನೆ ಸುದ್ದಿ ಜಾಲ 2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

0

ಬೆಂಗಳೂರು : 2026ರ ಸಿಇಟಿ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು.

ಇದಕ್ಕೆ ಆನ್‌ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜೊತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು ಎಂದು ಕೆಇಎ ತಿಳಿಸಿದೆ. ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ಈ ವಿಚಾರದಲ್ಲಿ ವಿಷಯ ತಜ್ಞರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕೆಇಎ ಮಾಹಿತಿ ನೀಡಿದೆ.