ಮಂಗಳೂರು : ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ, ತುಂಬು ಗರ್ಭಿಣಿಗೆ ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ.
ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ ಬಳಿಕ ಹೆರಿಗೆಗಾಗಿ ಪರದೆ ಕಟ್ಟಿ ರೈಲಿನಲ್ಲಿದ್ದ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ವೈದ್ಯಕೀಯ ಸೌಲಭ್ಯವಿಲ್ಲದೆ ತೀವ್ರ ರಕ್ತ ಸಾವ್ರದಿಂದ ಬಳಲುತ್ತಿದ್ದ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ ರೈಲು ನಿಲ್ಲಿಸಿ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಮಗು ಸುರಕ್ಷಿತವಾಗಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.















