ಮನೆ ಸುದ್ದಿ ಜಾಲ ಧಾರ್ಮಿಕ ಕೇಂದ್ರಗಳನ್ನು ರಾಜಕೀಯ ಉದ್ದೇಶಕ್ಕೆ ಉಪಯೋಗಿಸುವುದು ಸರಿಯಲ್ಲ: ಹೈಕೋರ್ಟ್

ಧಾರ್ಮಿಕ ಕೇಂದ್ರಗಳನ್ನು ರಾಜಕೀಯ ಉದ್ದೇಶಕ್ಕೆ ಉಪಯೋಗಿಸುವುದು ಸರಿಯಲ್ಲ: ಹೈಕೋರ್ಟ್

0

ಬೆಂಗಳೂರು : ಧಾರ್ಮಿಕ ಸ್ಥಳಗಳನ್ನು ರಾಜಕೀಯ ಉದ್ದೇಶಕ್ಕೆ ಉಪಯೋಗಿಸಿಕೊಳ್ಳುವುದು ಸರಿಯಾದ ಕ್ರಮವಲ್ಲ ಎಂದು ಹೈಕೋರ್ಟ್ ತಿಳಿಸಿದೆ ಎನ್ನಲಾಗಿದೆ, ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಶಿವಮೊಗ್ಗ ದೇವಸ್ಥಾನದಲ್ಲಿ ರಾಜಕೀಯ ಸಭೆ ನಡೆಸಿದ ಆರೋಪ ಸಂಬಂಧವಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದೆ ಎನ್ನಲಾಗಿದೆ.

ಶಿವಮೊಗ್ಗದ ತುಂಗಾನಗರ ಪೊಲೀಸ್​​ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಆ ಸಂಬಂಧ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿ ರದ್ದತಿ ಕೆ.ಎಸ್. ಈಶ್ವರಪ್ಪ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ರಾಜಕೀಯ ಕಾರಣಗಳಿಗೆ ನೀವು ಧಾರ್ಮಿಕ ಸ್ಥಳಗಳನ್ನು ಬಳಕೆ ಮಾಡಲಾಗದು ಎಂದು ವಿರಾಮ ಇಡಬೇಕು ಎಂದು ತಿಳಿಸಿ, ವಿಚಾರಣೆ ಮುಂದೂಡಿತು. ನಂತರ ವಿಚಾರಣೆ ವೇಳೆ ಅರ್ಜಿದಾರರು ಪರ ವಕೀಲರು, ದೇವಸ್ಥಾನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಯಾವುದೇ ರಾಜಕೀಯ ಭಾಷಣ ಮಾಡಿಲ್ಲ. ಯಾವ ರಾಜಕೀಯ ಚಟುವಟಿಕೆ ನಡೆಸಲಾಗಿದೆ ಎಂಬುದನ್ನು ದೂರಿನಲ್ಲಿ ವಿವರಿಸಲಾಗಿಲ್ಲ ಎನ್ನಲಾಗಿದೆ .

ಕಾಯಿದೆ ಅಡಿ ಅಪರಾಧವಾಗುವ ಯಾವುದೇ ಕೃತ್ಯ ನಡೆಸಿಲ್ಲ. 14 ಸಾಕ್ಷಿಗಳ ಪೈಕಿ 13 ಮಂದಿ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಒಬ್ಬೇ ಒಬ್ಬರು ಪ್ರತ್ಯಕ್ಷದರ್ಶಿ ಇದ್ದಾರೆ. ಪ್ರಕರಣದಲ್ಲಿ ದೇವಾಲಯದ ಅರ್ಚಕ ಮತ್ತು ಇನ್ನೊಬ್ಬ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದು ಮಾಡಬೇಕು ಎಂದು ಕೋರಿದರು ಎನ್ನಲಾಗಿದೆ . ಸರ್ಕಾರದ ಪರ ವಕೀಲರು, ದೇವಸ್ಥಾನದಲ್ಲಿ ಸಭೆ ನಡೆಸಲಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಚರ್ಚೆ ನಡೆಸಲಾಗಿದೆ. ಆದ್ದರಿಂದ ಧಾರ್ಮಿಕ ಸ್ಥಳಗಳ (ದುರ್ಬಳಕೆ) ತಡೆ ಕಾಯಿದೆ ಅಡಿ ಪ್ರಕರಣ ದಾಖಲಿಸಿದ್ದು ಸರಿಯಾದ ಕ್ರಮವಾಗಿದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ವಿಚಾರಣೆಯನ್ನು ಮುಂದೂಡಿತು ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ

2024ರ ಲೋಕಸಭಾ ಚುನಾವಣೆಯ ವೇಳೆ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಶಿವಮೊಗ್ಗದ ಆದಿ ರಂಗನಾಥ ದೇವಾಲಯದಲ್ಲಿ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಮತ್ತು ಇತರರು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಸಭೆ ನಡೆಸಿ ಚರ್ಚಿಸಿದ್ದರು ಎನ್ನಲಾಗಿದೆ. ಇದರ ಕುರಿತು  ಮಾಹಿತಿಯ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರು ತುಂಗಾನಗರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಅನುಸಾರ ಈಶ್ವರಪ್ಪ ಸೇರಿ 9 ಮಂದಿಯ ವಿರುದ್ಧ ಧಾರ್ಮಿಕ ಸಂಸ್ಥೆಗಳ ದುರ್ಬಳಕೆ ಮಾಡಿರುವ ತಡೆ ಕಾಯಿದೆ ಸೆಕ್ಷನ್​ಗಳಾದ 3, 6, ಮತ್ತು 7ರ ಪ್ರಕರಣ ದಾಖಲಿಸಲಾಗಿದೆ. ಇದನ್ನು ಪ್ರಶ್ನಿಸಿ ಕೆ.ಎಸ್​. ಈಶ್ವರಪ್ಪ, ಇತರರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಬಂದಿದೆ.