ಚಾಮರಾಜನಗರ ಇಂದು (ಮೇ 01) ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಇದರಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ತಾಳುಬೆಟ್ಟದ ಕ್ರಾಸ್ ಹತ್ತಿರ ನಡೆದಿದೆ.
ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ಃಒಗುತ್ತಿದ್ದ ಬಸ್ (ಕೆಎ-09 ಎಫ್-5415) ತಾಳುಬೆಟ್ಟದ ತಿರುವಿನಲ್ಲಿ ತಡೆಗೋಡೆಯ ಹತ್ತಿರ ಪಲ್ಟಿಯಾಗಿದ್ದು. ಬಸ್ನಲ್ಲಿದ್ದ 50 ಮಂದಿ ಪ್ರಯಾಣಿಕರಲ್ಲಿ 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ, ಇನ್ನೂ ಹಲವಾರು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ವಿಷಯ ತಿಳಿದು ಬಂದಿದೆ ಎನ್ನಲಾಗಿದೆ. ಬಸ್ ನ ನಿರ್ವಾಹಕಿ ಪದ್ಮಾವತಿ ಅವರಿಗೆ ತಲೆಗೆ ತೀವ್ರ ಗಾಯವಾಗಿದೆ ಎನ್ನಲಾಗಿದೆ.
ಮೈಸೂರಿನ ಪ್ರಯಾಣಿಕರಾದ ದಾಕ್ಷಾಯಿಣಿ, ಸಿದ್ದಯ್ಯನಪುರದ ಸುಂದ್ರಮ್ಮ ಬಸವರಾಜು ಎಂಬವರಿಗೂ ತೀವ್ರ ಪೆಟ್ಟಾಗಿದ್ದು. ಗಾಯಗೊಂಡ ಎಲ್ಲ ಪ್ರಯಾಣಿಕರಿಗೂ ಕೌದಳ್ಳಿ, ಹನೂರು ಮತ್ತು ಕೊಳ್ಳೇಗಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದುಬಂದಿದೆ.
ಹುಣ್ಣಿಮೆ ಹಿನ್ನೆಲೆಯಲ್ಲಿ ವಾಹನ ದಟ್ಟಣೆಯೂ ಹೆಚ್ಚಾಗಿದ್ದು ಹತ್ತಾರು ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರಕ್ಕೆ ಸುಗಮ ಅನುವು ಮಾಡಿಕೊಟ್ಟರು ಎನ್ನಲಾಗಿದೆ.
ಕೊಳ್ಳೇಗಾಲ ಆಸ್ಪತ್ರೆಯಲ್ಲಿ 25 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಿರುವಿನಲ್ಲಿ ಉರುಳುತ್ತಿದ್ದಂತೆ ಚಾಲಕ ಬಸ್ಸಿನಿಂದ ಜಿಗಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಆದರೆ ಆರಂಭದಿಂದಲೂ ತುಂಬಾ ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಎಚ್ಚರಿಸಿದರೂ ಕಿವಿಗೊಡಲಿಲ್ಲ. ಎಂದು ಗಾಯಾಳುಗಳು ತಿಳಿಸಿದ್ದಾರೆ ಎನ್ನಲಾಗಿದೆ.















