ಮನೆ ಸುದ್ದಿ ಜಾಲ ಮಾದಕ ವಸ್ತು ಸೇವನೆ ಮಾಡಿದ ಆರೋಪ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಮಾದಕ ವಸ್ತು ಸೇವನೆ ಮಾಡಿದ ಆರೋಪ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

0

ಬೆಂಗಳೂರು ಶುಕ್ರವಾರ (ಮೇ 01) ರಂದು  ವಿದ್ಯಾರ್ಥಿ ಹುಡುಗನೊಬ್ಬ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕ್ಕಿಗೆ ಬಂದಿದೆ. ಬೆಂಗಳೂರು ನಗರ ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್​ನಲ್ಲಿ ಎ.ಪಿ‌.ಆದಿತ್ಯ(19) ಎಂಬ ಯುವಕ ಶವ ಪತ್ತೆಯಾಗಿದ್ದಾನೆ ಎನ್ನಲಾಗಿದೆ, ಈ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು. 2ನೇ ವರ್ಷದ ಬಿಎಸ್​ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆದಿತ್ಯ ಏಪ್ರಿಲ್ 29ರಂದೇ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ, ಆತನ ಗೆಳೆಯರು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ಇನ್ನು  ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ಆದಿತ್ಯ ಪೋಷಕರು ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ತಮ್ಮ ಮಗನನ್ನು ಮಾದಕವಸ್ತು ಸೇವನೆ ಕೇಸ್​​​ನಲ್ಲಿ ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡಲಾಗಿ ಹಾಗೂ ಮಾನಸಿಕ ಹಿಂಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಮಾನಸಿಕವಾಗಿ  ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ಆದಿತ್ಯ ತಂದೆ ಪ್ರದೀಪ್ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗುತ್ತಿದೆ, ಈ ಪ್ರಕರಣದ ಕುರಿತ್ತಾಗಿ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.