ಮನೆ ಸುದ್ದಿ ಜಾಲ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಆ*ತ್ಮಹ*ತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಆ*ತ್ಮಹ*ತ್ಯೆ

0

ಬೆಂಗಳೂರಿನ ಹುಳಿಮಾವಿನ ಹಳೆ ಪೋಸ್ಟ್ ಆಫೀಸ್‌ ಬಳಿಯ ನಿವಾಸದಲ್ಲಿ ವಂದನಾ (23) ಎಂಬ ಗೃಹಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಅಂಬುವವನ  ಜೊತೆ ವಂದನಾ ಅವರ ಮದುವೆ ಅದ್ದೂರಿಯಾಗಿ ನಡೆದಿತ್ತು ಎನ್ನಲಾಗಿದೆ. ಮದುವೆ ಸಮಯದಲ್ಲಿ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಬೈಕ್ ಹಾಗೂ ಬಂಗಾರಗಳನ್ನು ವರದಕ್ಷಿಣೆ ರೂಪದಲ್ಲಿ ಕೊಡಲಾಗಿತ್ತು ಎನ್ನಲಾಗಿದೆ. ಪ್ರಸ್ತುತ ಈ ದಂಪತಿಗೆ ಮೂರು ತಿಂಗಳ ಪುಟ್ಟ ಮಗುವಿದೆ. ಮದುವೆಯಾದ ಕೆಲವು ದಿನಗಳ ನಂತರ ಗಂಡ ವಿಕ್ರಂ ಶೇಷ ಇನ್ನೂ ವರದಕ್ಷಿಣೆ ತರುವಂತೆ ಪತ್ನಿಯ ಜೊತೆ ಪದೇ ಪದೇ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ವಂದನಾ ಹಲವು ಬಾರಿ ಹೇಳಿಕೊಂಡಿದ್ದರು ಎನ್ನಲಾಗಿದೆ. ಈ ಹಿಂದೆ ಎರಡೂ ಕುಟುಂಬಗಳ ನಡುವೆ ರಾಜಿ ಸಂಧಾನ ನಡೆಸಿ, ಬುದ್ಧಿ ಹೇಳಿ ಕಳುಹಿಸಲಾಗಿತ್ತು ಎಂದು ಕುಟುಂಬಸ್ಥರು ದೂರಿನ್ನಿ ಹೇಳೀದ್ದಾರೆ.

ಮೃತ ವಂದನಾ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂಬ ವಿಷಯ ತಿಳಿದ ತಕ್ಷಣ ಅವರನ್ನು ಪೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಹೋಗುವ ಮಧ್ಯದಲ್ಲೆ ವಂದನಾ ಕೊನೆ ಉಸಿರು ಬಿಟ್ಟಿದ್ದಾರೆ ಎನ್ನಲಾಗಿದೆ. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವಂದನಾ ಅವರ ಪೋಷಕರು ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ, “ನಮ್ಮ ಮಗಳು ಆ*ತ್ಮಹ*ತ್ಯೆ ಮಾಡಿಕೊಂಡಿಲ್ಲ, ಬದಲಾಗಿ ವರದಕ್ಷಿಣೆಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ” ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ವಂದನಾ ಅವರ ಪೋಷಕರು ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ವಿಕ್ರಂ ಶೇಷ, ಅತ್ತೆ ಅಮೃತ, ಮಾವ ಶ್ರೀನಿವಾಸ್ ಮತ್ತು ಮೈದುನ ವಿನಿಷ್ ಎಂಬುವವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವರದಕ್ಷಿಣೆ ಕಿರುಕುಳ ಮತ್ತು ಆ*ತ್ಮಹ*ತ್ಯೆಗೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಈ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.