ಮನೆ ರಾಜ್ಯ ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ..!

ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ..!

0

ಉಡುಪಿ : ಕನ್ನಡ ಚಲನಚಿತ್ರ ಖ್ಯಾತ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾರಿಯಮ್ಮನ ಸ್ವರ್ಣ ಗದ್ದುಗೆ ಮತ್ತು ವಿವಿಧ ಶೈಲಿಯ ಕಲಾತ್ಮಕ ಕೆತ್ತನೆಗಳನ್ನು ಕಂಡು ಈ ಕೆಲಸವನ್ನೆಲ್ಲ ಕಾಪುವಿನ ಅಮ್ಮ ಮಾಡಿಸಿಕೊಂಡಿದ್ದಾರೆ.

ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದರು. ಈ ವೇಳೆ ನಟ ಶಶಿಕುಮಾರ್ ಅವರಿಗೆ ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಲಾಯಿತು.