ಚಿಕ್ಕಮಗಳೂರು : ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತಎಣಿಕೆಯಲ್ಲಿ ಕೊನೆಗೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ.
ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು. ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು ನಗರದ IDSG ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತಎಣಿಕೆ ಮಾಡಲಾಗಿದೆ.
ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಅತ್ತ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅವರ ಅಭಿಮಾನಿಗಳು ಸಂಭ್ರಮಿಸಿದರು. 267 ಮತಗಳು ಬಹುತೇಕ ತಿರಸ್ಕೃತ ಬೆನ್ನಲ್ಲೇ ರಾಜೇಗೌಡ ಗೆದ್ದರು ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.
ಈ ಬಗ್ಗೆ ಕಾಂಗ್ರೆಸ್ ಶಾಸಕ ರಾಜೇಗೌಡ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ಮರು ಮತಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ ನನಗೆ ಗೆಲುವಾಗಿದೆ. ನನ್ನ ಕಾರ್ಯಕರ್ತರು ಸಂಭ್ರಮ ಪಡುವಂತಾಗಿದೆ. ನನ್ನ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದರು. ಆದರೆ ಸತ್ಯಕ್ಕೆ ಜಯವಾಗಿದೆ ಎಂದರು.
ಈ ಹಿಂದೆ ಮತಎಣಿಕೆ ವೇಳೆ ಪ್ರತಿಯೊಂದು ಮತಗಳನ್ನ ಪರಿಶೀಲನೆ ಮಾಡಿದ್ದರೂ ಆರೋಪ ಮಾಡಿದ್ದರು. ಕೆಲವು ಟ್ರಂಕ್ ಗಳು ಓಪನ್ ಆಗಿತ್ತು, ಅದಕ್ಕೆ ನಾನು ಟ್ಯಾಂಪರಿಂಗ್ ಮಾಡಿರಬಹುದು ಎಂದು ಆರೋಪ ಮಾಡಿದ್ದೆ. ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಅಂದ್ರು. ಹಾಗಾಗಿ ನನಗೆ ಅನುಮಾನ ಬಂದಿತ್ತು. 12 ಅಂಚೆ ಮತಗಳು ನಾಪತ್ತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.














