ಮನೆ ರಾಜ್ಯ ಪ್ರವಾಹ ಮುನ್ನೆಚ್ಚರಿಕೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಪ್ರವಾಹ ಮುನ್ನೆಚ್ಚರಿಕೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

0

ಮೈಸೂರು (Mysuru): ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ನಿಯಮಿತ ಪ್ರಕಟಣೆ ಹೊರಡಿಸಿದೆ.

ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವುದು ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗಡೆ ತೆರಳುವಂತೆ ಕೋರಲಾಗಿದೆ.