ಬೆಂಗಳೂರು ಸೋಮವಾರ (ಮೇ 04): ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ ಮುಖ ತೋರಿಸಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ದಿಢೀರನೆ ಭಾರೀ ಮಳೆ ಬಂದಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮುಂಬರುವ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎನ್ನಲಾಗಿದೆ.
ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೀದರ್, ಕಲ್ಬುರ್ಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ ಎನ್ನಬಹುದು.
ಕರ್ನಾಟಕದ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 05 ಮತ್ತು ಮೇ 7ರಂದು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ (3.1° C ನಿಂದ 5.0° C). ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6° C ನಿಂದ 3.0° C ಹೆಚ್ಚಾಗಿದೆ ಎನ್ನಬಹುದು.














