ಮನೆ ರಾಜ್ಯ ಕಬ್ಬನ್ ಪಾರ್ಕ್ – ವಿದ್ಯುತ್ ವ್ಯತ್ಯಯದ ಕಾರಣ ಹಿನ್ನೆಲೆ ಮೆಟ್ರೋ ನಿಲ್ದಾಣ ಬಂದ್

ಕಬ್ಬನ್ ಪಾರ್ಕ್ – ವಿದ್ಯುತ್ ವ್ಯತ್ಯಯದ ಕಾರಣ ಹಿನ್ನೆಲೆ ಮೆಟ್ರೋ ನಿಲ್ದಾಣ ಬಂದ್

0

ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿರುವ ಪ್ರಮುಖ ನಿಲ್ದಾಣಗಳಲ್ಲಿ ಒಂದಾದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಇಂದು (ಸೋಮವಾರ) ಬೆಳಿಗ್ಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ವಿದ್ಯುತ್ ವ್ಯತ್ಯಯದಿಂದಾಗಿ ಮೆಟ್ರೋ ನಿಲ್ದಾಣದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ವಾರದ ಮೊದಲ ದಿನವೇ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲು ನಿಲುಗಡೆ ಸ್ಥಗಿತಗೊಂಡಿರುವುದು ಕಚೇರಿಗೆ ತೆರಳುವ ಉದ್ಯೋಗಿಗಳು ಮತ್ತು ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿನ ಅನಾನುಕೂಲತೆಯನ್ನುಂಟು ಮಾಡಿದೆ. ಈ ಅನಿವಾರ್ಯ ತೊಂದರೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸಿದೆ.

ಈ ಕುರಿತು ನಮ್ಮ ಮೆಟ್ರೋ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ವಿದ್ಯುತ್ ವ್ಯತ್ಯಯದಿಂದಾಗಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಬಂದ್ ಆಗಿತ್ತು. ವಿದ್ಯುತ್ ಪೂರೈಕೆ ಆದ ಬಳಿಕ ಓಪನ್ ಆಗಲಿದೆ ಎಂದು ತಿಳಿಸಿತ್ತು. ಅದರಂತೆ ಇದೀಗ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಆಗಿದೆ.