ಕನ್ನಡ ಚಿತ್ರರಂಗದಲ್ಲಿ ಲವರ್ ಬಾಯ್ ಇಮೇಜ್ನಿಂದ ಹಾಗೂ ಎಮೋಷನಲ್ ಪಾತ್ರಗಳಿಂದ ತಮ್ಮದೇ ಬ್ರ್ಯಾಂಡ್ ಕ್ರಿಯೇಟ್ ಮಾಡಿಕೊಂಡಿರುವ ನಟ ಗಣೇಶ್ ಚಿತ್ರರಂಗದಲ್ಲಿ ನಾಯಕ ನಟನಾಗಿ 20 ವರ್ಷ ಪೂರೈಸಿರುವ ಸಂಭ್ರಮದಲ್ಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಅವರ ಮುಂಬರುವ ಚಿತ್ರಗಳ ತಂಡ ಸಂಭ್ರಮಾಚರಿಸುತ್ತಿದೆ. ಇದೀಗ ಬೃಂದಾವಿಹಾರಿ ಚಿತ್ರತಂಡ ನಾಯಕ ನಟನಿಗೆ ಅಭಿನಂದನೆ ತಿಳಿಸಿದೆ ಎನ್ನಬಹುದು.
ಹೊಸ ಸಿನಿಮಾ ಬೃಂದಾವಿಹಾರಿ ಚಿತ್ರತಂಡ ಈಗಾಗಲೇ ಶೂಟಿಂಗ್ ಮುಗಿಸಿದ್ದು, ಚಿತ್ರದ 2ನೇ ‘ರಾಧಾ ರಾಧಾ’ ಹಾಡನ್ನು ಇತ್ತೀಚೆಗೆ ತುಮಕೂರಿನಲ್ಲಿ ಅದ್ದೂರಿಯಾಗಿ ಅನಾವರಣಗೊಳಿಸಿತು. ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರೇ “ರಾಧಾ ರಾಧಾ” ಹಾಡನ್ನು ಸಹಸ್ರಾರು ಜನರ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು. ಡಾ.ವಿ.ನಾಗೇಂದ್ರ ಪ್ರಸಾದ್ ಬರೆದಿರುವ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿರುವ, ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಹಾಡಿರುವ ಹಾಡಿನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ದೇವಿಕಾ ಭಟ್ ಅಭಿನಯಿಸಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ರಾಧಾ ರಾಧಾ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡ ಅನುಭವ ಹಂಚಿಕೊಂಡಿತು ಎನ್ನಲಾಗಿದೆ.
ಈ ಕುರಿತು ನಾಯಕ ನಟ ಗಣೇಶ್ ಮಾತನಾಡಿ, ”ನನಗೂ ಹಾಗೂ ತುಮಕೂರಿಗೂ ಹತ್ತಿರದ ನಂಟು. ನಾನು ಓದಿದ್ದು ನೆಲಮಂಗಲದಲ್ಲಿ. ಆಗಾಗ್ಗೆ ತುಮಕೂರಿಗೆ ಬರುತ್ತಿದ್ದೆ. ಈಗ ನನ್ನ ಅಭಿನಯದ “ಬೃಂದಾವಿಹಾರಿ” ಚಿತ್ರದ ಹಾಡು ತುಮಕೂರಿನಲ್ಲಿ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ” ಎಂದು ಸಂತೋಷ ಹಂಚಿಕೊಂಡರು ಎನ್ನಬಹುದು. ಈ ಕುರಿತು ಇನ್ನೂ, ನಾನು ನಾಯಕನಾಗಿ 20 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ನನ್ನ ಯಶಸ್ಸನ್ನು ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ಅವರಿಂದಲೇ ಇದು ಸಾಧ್ಯವಾಗಿದ್ದು. ಇದೇ ಸಂದರ್ಭದಲ್ಲಿ ನನ್ನ ಎಲ್ಲಾ ಚಿತ್ರದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ತಿಳಿಸುತ್ತೇನೆ. ವಿಶೇಷ ಧನ್ಯವಾದವನ್ನು ಉದಯ ಟಿವಿಗೆ ಅರ್ಪಿಸುತ್ತೇನೆ. ಅಲ್ಲಿನ “ಕಾಮಿಡಿ ಟೈಮ್” ಕಾರ್ಯಕ್ರಮವೇ ನನ್ನನ್ನು ಚಿತ್ರರಂಗಕ್ಕೆ ಕರೆತಂದಿದ್ದು. “ಬೃಂದಾ ವಹಾರಿ” ಚಿತ್ರದ ಮೊದಲ ಹಾಡು “ರಾಮ ರಾಮ” ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈಗ ಬಿಡುಗಡೆಯಾಗಿರುವ “ರಾಧಾ ರಾಧಾ” ಚಿತ್ರದ ಹಾಡು ಕೂಡ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎಂದು ವಿಶ್ವಾಸ ಹಂಚಿಕೊಂಡಿದ್ದಾರೆ.
ಬೃಂದಾವಿಹಾರಿ ಚಿತ್ರದ ನಿರ್ದೇಶಕ ಶ್ರೀನಿವಾಸ್ ರಾಜ್ ಮಾತನಾಡಿ, ಚಿತ್ರದಲ್ಲಿ ಏಳು ಹಾಡುಗಳಿವೆ. ಇದೀಗ ಎರಡನೇ ಹಾಡು ಅನಾವರಣಗೊಂಡಿದೆ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ಸಮೃದ್ಧಿ ಮಂಜುನಾಥ್, ನಾಯಕ ಗಣೇಶ್ ಹಾಗೂ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ನವಾಬ್ ಅವರಿಗೆ ಧನ್ಯವಾದ ಹೇಳುತ್ತೇನೆ. ಉಳಿದ ಹಾಡುಗಳು ಸಹ ಸುಮಧುರವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದರು. ಬೃಂದಾವಿಹಾರಿ ನಮ್ಮ ಸಂಸ್ಥೆ ನಿರ್ಮಾಣದ ನಾಲ್ಕನೇ ಚಿತ್ರ. ತುಮಕೂರಿನಲ್ಲಿ ಸಹಸ್ರಾರು ಜನರ ಉಪಸ್ಥಿತಿಯಲ್ಲಿ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದ್ದು ಬಹಳ ಸಂತೋಷವಾಗಿದೆ ಎಂದು ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರು ಹೇಳಿದ್ದಾರೆ ಎನ್ನಲಾಗಿದೆ.
ಇದು ನನ್ನ ಮೊದಲ ಚಿತ್ರ. ಗಣೇಶ್ ಅವರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕಿ ದೇವಿಕಾ ಭಟ್. ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವನ್ನು ಸಮೃದ್ಧಿ ವಿ ಮಂಜುನಾಥ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಶ್ರೀನಿವಾಸರಾಜು ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ತೆರೆಯ ಮೇಲೆ ಪ್ರೇಕ್ಷಕರ ಮುಂದೆ ಬರಲಿದೆ ಎಂಬ ಮಾಹಿತಿ ತಿಳಿಸಿದ್ದರು ಎನ್ನಲಾಗಿದೆ.













